ಬಂಟ್ವಾಳ: ಮಹಿಳೆಯರು ಸ್ವಾವಲಂಬಿಯಾಗುವುದರೊಂದಿಗೆ ತಮ್ಮ ಮೇಲಾಗುತ್ತಿರುವ ದೌರ್ಜನ್ಯ, ಅತ್ಯಾಚಾರ, ಹಿಂಸೆ, ಅಸಮಾನತೆಯನ್ನು ಧೈರ್ಯವಾಗಿ ಎದುರಿಸಿ ಪುರುಷರಿಗೆ ಸಮಾನವಾಗಿ ಬದುಕಬೇಕೆಂದು ಬಿ.ಆರ್.ಎಂ.ಪಿ.ಸಿ. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಪೂರ್ಣೇಶ್ವರಿ ಭಟ್ ಕರೆನೀಡಿದರು. ಇದನ್ನೂ ಓದಿ:  ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆ
ಅವರು ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆ ವಿದ್ಯಾಗಿರಿ, ಬಂಟ್ವಾಳ – ಅಂತಾರಾಷ್ಟ್ರೀಯ  ಮಹಿಳಾ ದಿನಾಚರಣೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಡಿ.ಮಂಚಿ ಮಾತನಾಡಿ ಪುರುಷಪ್ರಧಾನ ಸಮಾಜದಲ್ಲಿ ಮಹಿಳೆಯರು ಸಮಪಾಲು-ಸಮಬಾಳು ಮಾತಿಗೆ ಬದ್ಧರಾಗಿ ಎಲ್ಲಾರಂಗದಲ್ಲೂ ಪ್ರಗತಿಸಾಧಿಸಿ ಸಮಾಜದಲ್ಲಿ ತಮ್ಮ ಸ್ಥಾನಮಾನದ ಅಗತ್ಯತೆಯನ್ನು ಸಾಬೀತುಪಡಿಸಬೇಕಾದ ಅಗತ್ಯವಿದೆ. ಮಹಿಳೆ ಜಾಗೃತಗೊಂಡಾಗ ಸಂಘಟಿತರಾದಾಗ ಆಕೆಯೂ ಪುರುಷನಿಗೆ ಸಮಾನವಾಗಿ ಬೆಳೆಯಬಹುದೆಂದು ಹೇಳಿದರು.
ವೇದಿಕೆಯಲ್ಲಿ ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಶಿಧರ್ ಕೆ, ಎಸ್.ವಿ.ಎಸ್. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚೈತ್ರಾ ಶೆಟ್ಟಿ, ಪೂರ್ವ ಪ್ರಾಥಮಿಕ ಶಾಲೆಯ ಶ್ರೀಮತಿ ವೀಣಾ ದೇವಾಡಿಗ ಉಪಸ್ಥಿತರಿದ್ದರು.
ಬಿ.ಸಿ.ಎ.ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸಹನಾ ಸ್ವಾಗತಿಸಿ, ಎಸ್.ವಿ.ಎಸ್.ಪದವಿಪೂರ್ವಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವಿತಾ ವಂದಿಸಿದರು. ರಾಲ್ವಿನ್ ಲೋಯ್ಡ್ ರೋಡ್ರಿಗಸ್ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ವೀಕ್ಷಿತಾ ಗಟ್ಟಿ ನಿರೂಪಿಸಿ, ನಿಧಿ ತಂಡದವರು ಪ್ರಾರ್ಥಿಸಿದರು.