ಬಾಗಲಕೋಟೆಯ ನವನಗರದಲ್ಲಿ ಆಯೋಜಿಸಿದ್ದ “ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಿಸುವ ಕಾರ್ಯಕ್ರಮಕ್ಕಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಶುಭ ಹಾರೈಸಿದರು. ಇದನ್ನೂ ಓದಿ : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವನಾಂದ ಪಾಟೀಲ್, ಡಾ|| ಶರಣ ಪ್ರಕಾಶ ಪಾಟೀಲ್, ಆರ್.ಬಿ. ತಿಮ್ಮಾಪುರ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಸಿದ್ದು ಸವದಿ, ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ್, ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯನಮಠ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.