ತುಮಕೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಟೆನ್ನಿಸ್ ಅಭ್ಯಾಸ್ ಅಂಕಣ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾದ ಶೂಟಿಂಗ್ ಕೇಂದ್ರ, ಕೆನೋಯಿಂಗ್ ಮತ್ತು ಕಯಾಕಿಂಗ್ ಕೇಂದ್ರ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಿರ್ಮಿಸಲಾದ ಬಾಸ್ಕೆಟ್ ಬಾಲ್ ಅಂಕಣವನ್ನು ಗೃಹಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ಉದ್ಘಾಟನೆ ನೆರವೇರಿಸಿದರು. ಇದನ್ನೂ ಓದಿ : ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ
ಕೊರಟಗೆರೆ ಪಟ್ಟಣದಲ್ಲಿ ನಿರ್ಮಿಸಲಾದ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ, ತಾಲ್ಲೂಕು ಪಂಚಾಯಿತಿ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ವಿವಿಧ ರಸ್ತೆಗಳ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆ.
ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಮುಂತಾದವರು ಉಪಸ್ಥಿತರಿದ್ದರು.