ತುಮಕೂರು: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಳಿಯಾರು (Huliyar) ಠಾಣೆಯಲ್ಲಿ ನಡೆದಿದೆ. ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ : ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

ಮೃತನನ್ನು ಕಾಂತರಾಜು (45) ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡ್ತಿದ್ದ 6 ಜನರನ್ನ ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಠಾಣೆಯಲ್ಲಿ ಕಾಂತರಾಜು ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಠಾಣೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.

ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಎಸ್‌ಪಿ ಅಶೋಕ್‌ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.