ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.  ಇದನ್ನೂ ಓದಿ : ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೆಲ್, ನರಿಕೊಂಬು ನೂತನ ಅಧ್ಯಕ್ಷರಾಗಿ ಸುಧರ್ಶನ್ ಅಬೆರೊಟ್ಟು ಆಯ್ಕೆ

ಯುವಸಿಂಚನ ಪತ್ರಿಕೆ ಬಿಡುಗಡೆ :
ಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ ಎಂದು ಅವರು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕ ಹರೀಶ್ ವಿ ಪಚ್ಚನಾಡಿ ಹಾಗೂ ಸಂಪಾದಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜ ಸಂಘಟನೆ ಶ್ಲಾಘನೀಯ: ಶಾಸಕ ರಾಜೇಶ್ ನಾಯ್ಕ್
ಯುವವಾಹಿನಿ ಸಂಸ್ಥೆಯು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಂದುಗೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಯು. ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರು, “ಬಿಲ್ಲವ ಸಮಾಜದ ಹೆಮ್ಮೆಯ ಪುತ್ರಿಯಾಗಿ ದಿಶಾ ಪೂಜಾರಿ ಸಾಧನೆ ಸಮಸ್ತ ಸಮಾಜಕ್ಕೆ ಹೆಮ್ಮೆ ತರುವಂತಾಗಿದೆ,” ಎಂದು ಹೇಳಿದರು.
ಯುವವಾಹಿನಿ ಕೇಂದ್ರ ಸಮಿತಿಯು ದಿಶಾ ಪೂಜಾರಿ ಅವರಿಗೆ ₹25,000 ನಗದು ಪುರಸ್ಕಾರ ನೀಡಿ ಅಭಿನಂದಿಸಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ವಹಿಸಿದ್ದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಗ್ರಜ ಬಿಲ್ಡರ್ಸ ಮಾಲಕರಾದ ಸಂದೇಶ್ ಶೆಟ್ಟಿ, ಸೇವ್ ಲೈಫ್ ಚಾರಿಟಬಲ್ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್
ಉದ್ಯಮಿಗಳಾದ ಪ್ರಿಯದರ್ಶಿನಿ ಸುನೀಲ್ ಬಜ್ಪೆ, ಮನೋಜ್ ಶರ್ಮ, ಗೋಪಾಲ್ ಮೂಲ್ಯ, ರಾಜಶೇಖರ್ ಕೋಟ್ಯಾನ್ ಪುತ್ತೂರು  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ದಿಶಾ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು.

ವೇದಿಕೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಹಾಗೂ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಮೇನಾಡು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಧನ್ಯವಾದಗಳನ್ನು ಅರ್ಪಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.