ಹುಬ್ಬಳ್ಳಿ: ಪತ್ನಿಯ (Wife) ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಬ್ಯಾಹಟ್ಟಿ ಗ್ರಾಮದ ಶಾಂತಿನಗರ ಪ್ಲಾಟ್‌ನಲ್ಲಿ ನಡೆದಿದೆ.

ಫಕ್ಕೀರಪ್ಪ ಅಲಿಯಾಸ್ ಬಸು ಅಕ್ಕಿವಳ್ಳಿ ಕೊಲೆಯಾದ ದುರ್ದೈವಿ. ಪ್ರಕಾಶ್ ಕರಶೆಟ್ಟಿ ಕೊಲೆಗೈದ ಆರೋಪಿಯಾಗಿದ್ದಾನೆ. ಪ್ರಕಾಶನ ಪತ್ನಿಯೊಂದಿಗೆ ಬಸು ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಈ ಹಿಂದೆ ರಾಜೀ ಪಂಚಾಯತಿ ನಡೆದಿತ್ತು. ಬಳಿಕವೂ ಅನೈತಿಕ ಸಂಬಂಧ ಮುಂದುವರಿದಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.‌ ಇದನ್ನೂ ಓದಿ : ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ – ಅರ್ಹ ರೈತರ ಖಾತೆಗೆ 18,880 ಕೋಟಿ ಹಣ ಜಮೆ

ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.