ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ಸಂಭ್ರಮದಿAದ ನಡೆಯಿತು.
ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಮೌಲ್ಯಯುತ ಚಟುವಟಿಕೆಗಳು ಅವಶ್ಯಕ . ಆಸಕ್ತಿಯಿಂದ ವಿದ್ಯಾರ್ಥಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಶ್ರೇಷ್ಠ ವ್ಯಕ್ತಿಗಳಾಗಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎನ್ನುತ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಶಾಲಾಮಟ್ಟದಲ್ಲೇ ರೂಢಿಸಿಕೊಳ್ಳಬೇಕು ಎಂದು ನುಡಿದರು.
ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಹರಿಪ್ರಸಾದ್ ಎಲ್ಲಾ ಆಯ್ಕೆಯಾದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚೈತ್ರಾ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ಶ್ರೀಮತಿ ವೀಣಾ ಹಾಗೂ ಶಾಲಾ ನಾಯಕ ಭವಿಷ್ ಎಲ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡರು.
ವಿದ್ಯಾರ್ಥಿಗಳಾದ ಮುನಾವರ್ ಮಾಝ್ ಸ್ವಾಗತಿಸಿದರು, ಕುಮಾರಿ ರಿಧಾ ನಫೀಸಾ ಹಲಿಯಾರ್ ವಂದಿಸಿ , ಕುಮಾರಿ ಜೆನಿಶಾ ಲೊಬೋ ಕಾರ್ಯಕ್ರಮವನ್ನು ನಿರೂಪಿಸಿದರು.