ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಹಲವು ತಿಂಗಳುಗಳಿಂದ ರಾಶಿಯಾಗಿ ಬಿದ್ದಿದ್ದ ತ್ಯಾಜ್ಯದ ಕುರಿತು ಗ್ರಾಮಮಾಣಿ : ಗ್ರಾಮ ಸಭೆಯಲ್ಲಿ ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಿದ ಪಿಡಿಒ ಸಭೆಯಲ್ಲಿ ಸಾರ್ವಜನಿಕರು ಗಮನ ಸೆಳೆದಿದ್ದರು.
ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹಾಗೂ ಸಿಬ್ಬಂದಿ ತಂಡ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಯಂತ್ರದ ಮೂಲಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿದರು.
ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ತಂಡದ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.