ಬಂಟ್ವಾಳ, ಜು. 21: ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ .
ಬಿ .ಸಿ . ರೋಡ್ ರಂಗೋಲಿ ಸಭಾಂಗಣದಲ್ಲಿ ಜು. 21 ರಂದು ನಡೆಯಿತು. ಇದನ್ನೂ ಓದಿ:ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
ತೋಟಗಾರಿಕಾ ಇಲಾಖೆ ಬಂಟ್ವಾಳ ಇದರ ಹಿರಿಯ ಸಹಾಯಕ ನಿರ್ದೇಶಕ ಜೊ ಪ್ರದೀಪ್ ಡಿಸೋಜ ಸಂಪನ್ಮೂಲ ವ್ಯಕ್ತಿಯಾಗಿ ಸಮಗ್ರ ಮಾಹಿತಿ ವಿವರಿಸಿದರು.
ಇಲಾಖೆಯಿಂದ ಸಿಗುವ ವಿವಿಧ ಸವಲತ್ತುಗಳು, ಕೃಷಿ ಯಂತ್ರೋಪಕರಣಗಳ ಸಹಾಯಧನ ಮಾಹಿತಿ ನೀಡಿದರು.
ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘ ಬಂಟ್ವಾಳ ಅಧ್ಯಕ್ಷ ರಾಜ್ ಬಂಟ್ವಾಳ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ಶಶಿಕಲ ಕೃಷ್ಣ ಭಂಡಾರಿ, ಡಾ. ರಜತ್, ವಿಠಲ ಸಪಲ್ಯ, ಸದಾಶಿವ ಬಂಗುಲೆ, ನಾಗೇಶ್ ಪೂಜಾರಿ ಕಲ್ಯಾರ್ ಉಪಸ್ಥಿತರಿದ್ದರು.
ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬ್ರಬೈಲು ಮತ್ತು ಗಣ್ಯರು ಉಪಸ್ಥಿತರಿದ್ದರು.
ತೆಂಗು ಸೌಹಾರ್ಧ ಸಹಕಾರಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಷಿತ್ ಕುಮಾರ್ ಸಮಗ್ರ ವರದಿ ಮಂಡಿಸಿದರು.
ಕೃಷ್ಣಪ್ಪ ಸಪಲ್ಯ ಅಂತರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
