ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬಂಟ್ವಾಳ ತಾಲೂಕು ವ್ಯಾಪ್ತಿಗೆ ಒಳಪಡುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಯಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ 5 ಲಕ್ಷ ಸಹಾಯಧನದ ಡಿ.ಡಿ. ಯನ್ನು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಯಿ ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕ್ ಯೋಜನಾಧಿಕಾರಿ ಮಾದವ ಗೌಡ, ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸದಾನಂದ ಗೌಡ, ಹಾಗೂ ಚಂದ್ರಶೇಖರ ಗೌಡ, ಜನಜಾಗೃತಿ ಅಧ್ಯಕ್ಷರಾದ ಸದಾನಂದ ಶೀತಲ್, ವಲಯ ಮೇಲ್ವಿಚಾರಕ ಶಿವರಂಜನ್, ಒಕ್ಕೂಟದ ಅಧ್ಯಕ್ಷ ಪರಮೇಶ್ವರ್. ಊರಿನ ಪ್ರಮುಖರಾದ ಜಗದೀಶ್ ಕೊಯ್ಲಾ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಧರ್ಮರಾಜ್,ಸೇವಾ ಪ್ರತಿನಿಧಿಗಳು ಸದಸ್ಯರುಗಳು ಉಪಸ್ಥಿತರಿದ್ದರು