ಬಂಟ್ವಾಳ, ಜು. 30: ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಂದ್ರಹಾಸ ಪೂಜಾರಿ ಅವರ ಮನೆಗೆ ಹಾನಿಯಾಗಿರುವ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ :ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ

ಮನೆಯೊಳಗಿನ ಪೀಠೋಪಕರಣಗಳು, ಬಟ್ಟೆಗಳು ಹಾಗೂ ದಿನನಿತ್ಯದ ಬಳಕೆಯ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿರುವುದನ್ನು ವೀಕ್ಷಿಸಿದ ಶಾಸಕರು, ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು. ಬಳಿಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಸರ್ಕಾರದ ನಿಯಮಾನುಸಾರ ಪರಿಹಾರ ಮತ್ತು ಅಗತ್ಯ ನೆರವು ಶೀಘ್ರದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಸಜಿಪ, ಜಯಪ್ರಕಾಶ್ ಪೆರ್ವ, ಯೋಗೀಶ್ ಕೊಲ್ಯ, ಉಮೇಶ್ ಬಂಗೇರ ಸೇರಿದಂತೆ ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.