ಬಂಟ್ವಾಳ, ಜು. 30: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿದ ಶಾಸಕರು, ಸಂಭವಿಸಿದ ಹಾನಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸರ್ಕಾರದ ನಿಯಮಾನುಸಾರ ತುರ್ತು ಪರಿಹಾರ ಹಾಗೂ ಅಗತ್ಯ ನೆರವನ್ನು ಶೀಘ್ರವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ (VA) ಮಲ್ಲಿಕಾರ್ಜುನ್, ಪಿಡಿಒ ರಶ್ಮಿ ಆರ್. ಕಿಲ್ಲೆ, ಕಂದಾಯ ಇಲಾಖೆಯ ಅಧಿಕಾರಿ ರಿಟಾ ಡಿ’ಸೋಜಾ, ಮಾಜಿ ಪಂಚಾಯತ್ ಸದಸ್ಯ ರಘುವೀರ್ ಆಚಾರ್ಯ, ಸುಂದರ್, ರಾಮಚಂದ್ರ, ತಿರುಲೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
