ಸೋನಿಪತ್: ತಮ್ಮ ಇಡೀ ಜೀವನವನ್ನು ಮೂವರು ಹೆಣ್ಣುಮಕ್ಕಳ ಬೆಳೆಸಲು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡಲು ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು (Father) ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಕೊನೆಯುಸಿರೆಳೆದಿದ್ದು, ಅಂತಿಮ ದರ್ಶನಕ್ಕೂ ಬರಲಾಗದ ಪುತ್ರಿಯರು ವಿಡಿಯೋ ಕಾಲ್ (Video Call) ಮೂಲಕ ಅಂತ್ಯಸಂಸ್ಕಾರ(Cremation) ವೀಕ್ಷಿಸಿದ ಅಮಾನವೀಯ ಘಟನೆ ನಡೆದಿದೆ. ಇದನ್ನೂ ಓದಿ : ಪ್ರವೀಣ್ ಪ್ರವೀಣ್ನೆಟ್ಟಾರು ಕೊಲೆ ಕೇಸ್- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಅರೆಸ್ಟ್
ಮೂಲತಃ ಮುಂಬೈನ ಜವಳಿ ಉದ್ಯಮಿ ಶಿವಚರಣ್ ರಾಮ್ ರತನ್ ಗುಪ್ತಾ ಅವರು ಕಳೆದ ಎರಡು ವರ್ಷಗಳಿಂದ ಈ ವೃದ್ಧಾಶ್ರಮದಲ್ಲಿ ನೆಲೆಸಿದ್ದರು. ಹಿಂದೆ ಅವರ ಪತ್ನಿ ಮೀನಾ ಕೂಡ ಇಲ್ಲೇ ಮೃತಪಟ್ಟಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಪ್ತಾ ಅವರು ಮಂಗಳವಾರ ಮುಂಜಾನೆ 3:30 ರ ಸುಮಾರಿಗೆ ನಿಧನರಾದರು.
ಮೃತರ ಮೂವರು ಪುತ್ರಿಯರಾದ ಅನಿತಾ ನೇಪಾಳದಲ್ಲಿ ಶಿಕ್ಷಕಿಯಾಗಿದ್ದರೆ, ನಿಶಾ ಉತ್ತರ ಪ್ರದೇಶದ ಅಜಂಘಡ್‌ನಲ್ಲಿದ್ದರೆ ಕಿರಿಯ ಮಗಳು ಪ್ರಿಯಾ ಮುಂಬೈನಲ್ಲಿ ನೆಲೆಸಿದ್ದಾರೆ.
