ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ–2026ರ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮಾನ್ಯ ಮುಖ್ಯ  ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಪಥಸಂಚಲನ ವೀಕ್ಷಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌, ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡ ಈ ಐತಿಹಾಸಿಕ ದಿನವು ಕಲ್ಯಾಣ ಕರ್ನಾಟಕದ ಜನರ ಹಕ್ಕು, ಸ್ವಾಭಿಮಾನ ಹಾಗೂ ಅಭಿವೃದ್ಧಿಯ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ. ಈ ನೆಲದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ಉದ್ಯೋಗ, ಮೂಲಸೌಕರ್ಯ ಹಾಗೂ ಕೈಗಾರಿಕಾ ಬೆಳವಣಿಗೆಯ ಮೂಲಕ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಮುಂಚೂಣಿಗೆ ಕೊಂಡೊಯ್ಯುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಶ್ರೀ ಬಿ.ಆರ್‌ ಪಾಟೀಲ್‌, ಶ್ರೀಮತಿ ಕನೀಜ್‌ ಫಾತಿಮಾ, ಶ್ರೀ ಎಂ.ವೈ ಪಾಟೀಲ್‌, ಶ್ರೀ ಬಸವರಾಜ ಮತ್ತಿಮಡು, ಶ್ರೀ ಅಲ್ಲಮಪ್ರಭು ಪಾಟೀಲ್‌, ಸಂಸದರಾದ ಶ್ರೀ ರಾಧಾಕೃಷ್ಣ ದೊಡ್ಡಮನಿ, ಜಿಲ್ಲಾಧಿಕಾರಿ ಇಕ್ರಂ ಷರೀಫ್‌, ಕಲಬುರಗಿ ನಗರ ಪೊಲೀಸ್‌ ಆಯುಕ್ತ ಶರಣಪ್ಪ ಎಸ್‌.ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.