ಜನರ ದನಿಗೆ ಸ್ಪಂದನೆ – ಸುಶಾಸನದ ವಂದನೆ!
ಸಮಸ್ಯೆ ನಿಮ್ಮದು – ಪರಿಹಾರ ನಮ್ಮದು!

ಮೈಸೂರಿನ ಪಿರಿಯಾಪಟ್ಟಣದಲ್ಲಿ ಇಂದು ಪ್ರಜಾಸೇವಾ ಇಲಾಖೆ ಹಮ್ಮಿಕೊಂಡಿದ್ದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮವನ್ನು  ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ, ಜನರ ಅಹವಾಲುಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ : 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ಗೆ 1 ಕೋಟಿ ರೂ. ಘೋಷಣೆ

ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಸಂಸದ ಜಿ. ಸಿ. ಚಂದ್ರಶೇಖರ್, ಶಾಸಕರಾದ ಕೆ. ವೆಂಕಟೇಶ್, ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಡಾ. ಕೆ. ಶಿವಕುಮಾರ್, ಮೈಲಾಕ್ ಅಧ್ಯಕ್ಷ ಎಚ್. ಡಿ. ಗಣೇಶ್, ಅಂಬೇಡ್ಕರ್ ನಿಗಮದ ಅಧ್ಯಕ್ಷ ಸಿ. ನರೇಂದ್ರ, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ತಾಲ್ಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಪ್ರಜಾಸೇವಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮತ್ತಿತರರು ಉಪಸ್ಥಿತರಿದ್ದರು.