ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉಧ್ಘಾ ಟಿಸಿದರು. ಬಳಿಕ ಖ್ಯಾತ ಗಾಯಕಿ ಮೈಸೂರು ನಾಗಮಣಿ ಶ್ರೀನಾಥ್ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ ತಂಗಡಗಿ, ಕೆ.ಜೆ. ಜಾರ್ಜ್, ಪುಟ್ಟರಂಗಶೆಟ್ಟಿ, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಟಿ.ಎಸ್. ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಖ್ಯಾತ ಗಾಯಕಿ ಮೈಸೂರು ನಾಗಮಣಿ ಶ್ರೀನಾಥ್ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ
