ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಲಾ ಹಿರಿಯ ವಿದ್ಯಾರ್ಥಿ, ನ್ಯಾಯವಾದಿ ಆಶಾ ಪಿ. ರೈ ಧ್ವಜಾರೋಹಣ ನೆರವೇರಿಸಿ, ಸಂವಿಧಾನದ ಮಹತ್ವವನ್ನು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ವಿದ್ಯಾರ್ಥಿಗಳಾದ ನ್ಯಾಯವಾದಿ ಯಶೋಧಾ, ಗುತ್ತಿಗೆದಾರರಾದ ಗಣೇಶ್ ಕಾಮಾಜೆ, ವೈದ್ಯರಾದ ಡಾ.ಬಾಲಕೃಷ್ಣ ಅಗ್ರಬೈಲ್ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಶಾಲಾ ವಿದ್ಯಾರ್ಥಿಗಳಾದ ಬೆಳ್ಳಪ್ಪ ಹೂಗಾರ, ಖುಷಿ, ಸಮರ್ಥ್ ಗಣರಾಜ್ಯೋತ್ಸವ ಕುರಿತು ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಮಮತಾ, ಸದಸ್ಯರಾದ ದೇವದಾಸ್ ಅಗ್ರಬೈಲ್, ಕಿಶೋರ್ ಕುಲಾಲ್, ವಿನೋದಾ, ಸಹಶಿಕ್ಷಕರಾದ ಹೇಮಾವತಿ, ಶಿಕ್ಷಕಿಯರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಲಕ್ಷ್ಮೀ ಸ್ವಾಗತಿಸಿದರು. ಸಹಶಿಕ್ಷಕಿ ತಾಹಿರಾ ವಂದಿಸಿದರು. ಸಹಶಿಕ್ಷಕಿ ಸುಶೀಲಾ ಲಿಂಗಪ್ಪ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಸಂವಿಧಾನ ಪೀಠಿಕೆ ವಾಚಿಸಲಾಯಿತು. ಸಂವಿಧಾನ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.