ಕಲ್ಲಡ್ಕ ದ.ಕ.ಜಿ.ಪಂ.ಮಾದರಿ ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮಧುಸೂಧನ್ ಐತಾಳ್ ಧಜ್ವಾರೋಹಣ ನೆರವೇರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಅಣಕು ಸಂಸತ್ತು ನಡೆಸಲಾಯಿತು.
ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಮತ್ತು ಶಾಲಾ ಎಸ್.ಡಿ.ಎಂ.ಸಿ ಸದರಸ್ಯರು ಉಪಸ್ಥಿತರಿದ್ದರು.