ಭಾರತ ಇಂದು ಬಲಿಷ್ಠವಾಗಿ ಬೆಳೆದು ನಿಲ್ಲಲು ಕಾರಣರಾಗಿರುವ ನಮ್ಮ ನೆಚ್ಚಿನ ಶ್ರಮಿಕ ಪ್ರಧಾನಿ ಶ್ರೀ @narendramodi ಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜನಸಾಮಾನ್ಯರು ಸಂಕಲ್ಪ ತೊಟ್ಟಿದ್ದಾರೆ. 2024 ರಾಮರಾಜ್ಯ ನಿರ್ಮಾಣದ ಚುನಾವಣೆಯಾಗಿದ್ದು, ಮೋದಿ ಜೀ ಅವರ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಹಗಲಿರುಳೆನ್ನದೇ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ಬೀದರ್ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ಮೂಲಕ ತೆರಳಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ @bhagwantkhuba, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @PRajeevBJP, ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಶ್ರೀ ಪ್ರಭು ಚೌಹಾಣ್, ಶ್ರೀ ಶರಣು ಸಲಗಾರ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ರಘುನಾಥ ಮಲ್ಕಾಪುರೆ, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ ಪಾಟೀಲ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಶಿವಾನಂದ ಮಂಠಾಳ್ಕರ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.