ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.
ಸುಭದ್ರ, ಸಮೃದ್ಧ ಹಾಗೂ ಸುರಕ್ಷಿತ ಭಾರತ ಕಟ್ಟುತ್ತಾ, ಅಭಿವೃದ್ಧಿಯ ಗ್ಯಾರಂಟಿಯಾಗಿರುವ ಮೋದಿ ಜೀ ಅವರು ಜನತೆಯ ನಿರೀಕ್ಷೆಯಂತೆ ಮಗದೊಮ್ಮೆ ಪ್ರಧಾನಿಯಾಗಬೇಕಿದೆ. ಈ ನಿಟ್ಟಿನಲ್ಲಿ ಲೋಕಸಮರದಲ್ಲಿ ಬಹುದೊಡ್ಡ ವಿಜಯ ಸಾಧಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಸಂಕಲ್ಪ ಮಾಡಿಲಾಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಶ್ರೀ R Ashoka , ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ C T Ravi , ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ನೂತನ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಸಿ. ಕಲ್ಮರುಡಪ್ಪ, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ ಶೆಟ್ಟಿ, ವಿಭಾಗ ಪ್ರಭಾರಿಗಳಾದ ಶ್ರೀ ಗಿರೀಶ್ ಪಟೇಲ್, ವಿಧಾನಪರಿಷತ್ ಸದಸ್ಯರಾದ ಎಂ. ಕೆ. ಪ್ರಾಣೇಶ್, ಮಾಜಿ ಸಚಿವರುಗಳಾದ ಶ್ರೀ ಪ್ರಮೋದ್ ಮಧ್ವರಾಜ್, ಶಾಸಕರು ಹಾಗೂ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೆರೆ, ಮಾಜಿ ಶಾಸಕರುಗಳಾದ ಶ್ರೀ ಡಿ. ಎಸ್. ಸುರೇಶ್, ಶ್ರೀ ಬೆಳ್ಳಿ ಪ್ರಕಾಶ್, ಕಾಫಿ ಬೋರ್ಡ್ ಅಧ್ಯಕ್ಷರಾದ ಶ್ರೀ ದಿನೇಶ್ ದೇವವೃಂದ ಅವರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.