ಸಮುದಾಯ ಆರೋಗ್ಯ ಶುಶ್ರೂಷ ವಿಭಾಗ, ಯೇನೆಪೋಯ ನರ್ಸಿಂಗ್ ಕಾಲೇಜು, ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ, ಮಂಗಳೂರು ಇದರ ಆಶ್ರಯದಲ್ಲಿ ಫೆ.9 ರಂದು ಸಾರ್ವಜನಿಕ ಆರೋಗ್ಯದಲ್ಲಿ ತಂತ್ರಜ್ಞಾನವನ್ನು ಸಂಯೋಜಿಸುವ ಮುಂದಿನ ಹಾದಿಯ ಕುರಿತು ರಾಷ್ಟ್ರೀಯ ಕಾರ್ಯಗಾರ ನಡೆಯಿತು.

ನವದೆಹಲಿ ಡೈರೆಕ್ಟರ್‌ ಡಿಜಿಟಲ್ ಹೆಲ್ತ್ ನ ಡಾ. ರೀತೆನ್‌ ಆರೋನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಾರ್ವಜನಿಕರ ಆರೋಗ್ಯದಲ್ಲಿ ತಂತ್ರಜ್ಞಾನವನ್ನು ಸಂಯೋಜಿಸುವುದರ ಮಹತ್ವದ ಬಗ್ಗೆ ಮಾತನಾಡಿದರು.

ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯದ ಸಹ ಉಪಕುಲಪತಿ ಡಾ. ಶ್ರೀಪತಿ ರಾವ್ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದರು.

ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀನ ಕೆ.ಸಿ, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸವಿತ ನಾಯಕ್ ಉಪಸ್ಥಿತರಿದ್ದರು.

ಈ ಕಾರ್ಯಗಾರಕ್ಕೆ ವಿವಿಧ ರಾಜ್ಯಗಳಿಂದ ಸುಮಾರು 110 ಪ್ರತಿನಿಧಿಗಳು ಭಾಗವಹಿಸಿದ್ದರು.