ದಕ್ಷಿಣ ಕನ್ನಡದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಾದ ಶ್ರೀ ಮುಲ್ಲೈ ಮುಗಿಲನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.