ಬಿ.ಸಿ.ರೋಡ್ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ಫೆ.17ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.
ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆ ವಹಿಸಿದ್ದರು. ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಕಾಶ ಕಾರಂತ,ಶ್ರೀ ಆನಂದ, ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಗೌರಾವಾಧ್ಯಕ್ಷ ಜಗನ್ನಾಥ ಚೌಟ ಪ್ರಸ್ತಾವನೆ ಗೈದು, ಸ್ವಾಗತಿಸಿದರು.