ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ – ಲಿಂಗಾಯತ ಮಠಾಧೀಶರು ಸಿ.ಎಂ.ಸಿದ್ಧರಾಮಯ್ಯ ಅವರನ್ನು ಅಭಿನಂದಿಸಿ, ಸಮ್ಮಾನಿಸಿದರು.

ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಈ ಸಮಾರಂಭದಲ್ಲಿ ಹುಬ್ಬಳ್ಳಿಯ ಮೂರು ಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ನಡೆಯಿತು.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಪೌರಾಡಳಿತ, ಹಜ್ ಸಚಿವರಾದ ರಹೀಖಾನ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.