ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ

ಏ.26: 1ನೇ ಹಂತದಲ್ಲಿ : ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 7: 2ನೇ ಹಂತದಲ್ಲಿ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (ಎಸ್‌ಸಿ), ಕಲಬುರಗಿ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್‌, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತ
ಅಧಿಸೂಚನೆ ಪ್ರಕಟ – ಮಾ.28
ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.04
ನಾಮಪತ್ರ ಪರಿಶೀಲನೆ – ಏ. 05
ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.08
ಮತದಾನ – ಏ.26
ಮತ ಎಣಿಕೆ – ಜೂನ್‌ 4

ಎರಡನೇ ಹಂತ
ಅಧಿಸೂಚನೆ ಪ್ರಕಟ – ಏ.12
ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.19
ನಾಮಪತ್ರ ಪರಿಶೀಲನೆ – ಏ.20
ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.22
ಮತದಾನ – ಮೇ 7
ಮತ ಎಣಿಕೆ – ಜೂನ್‌ 4

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.