ಮತದಾರರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ತಾಲೂಕು ಆಡಳಿತ ಸೌಧದಲ್ಲಿ ನೀಡಲಾಯಿತು.

ಸಹಾಯಕ ಚುನಾವಣಾಧಿಕಾರಿ ಉದಯ ಕುಮಾರ್ ಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ, ತಹಸೀಲ್ದಾರ್ ಅರ್ಚನಾ ಭಟ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಶಾಂತ್, ಅಶೋಕ್ ಕುಮಾರ್, ತಾಲೂಕು ಕಚೇರಿ, ತಾಲೂಕು ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.

ತಾಲೂಕು ಆಡಳಿತ ಸೌದದ ಪ್ರವೇಶ ದ್ವಾರದ ಪಕ್ಕದಲ್ಲಿ ಸೆಲ್ಫಿ ಪಾಯಿಂಟ್ ಹಾಗೂ ಸಹಿ ಅಭಿಯಾನಕ್ಕೆ ಅವಕಾಶ ಮಾಡಲಾಗಿದ್ದು ಸೆಲ್ಫಿ ತೆಗೆದು ತಮ್ಮ ಮೊಬೈಲ್ ನ ಅಂತರ್ಜಾಲದಲ್ಲಿ ಅಪ್ಲೋಡ್ ಮಾಡ್ತಿದ್ದಾರೆ.