ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವ ಪ್ರಯುಕ್ತ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟವು ಡಿ.31 ರಂದು ಬೆಳಿಗ್ಗೆ ಗಂಟೆ 10 ರಿಂದ ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ವಠಾರದ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣದಲ್ಲಿ ನಡೆಯಲಿರುವುದು.
ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಂಕರನಾರಾಯಣ ಭಟ್‌ ಪುಂಡಿಕೈ ಕಾರ್ಯಕ್ರಮವನ್ನು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸೈನಿಕ ಕ್ಯಾ| ಬ್ರಿಜೇಶ್‌ ಚೌಟ ಮೊದಲಾದವರು ಭಾಗವಹಿಸಲಿದ್ದಾರೆ.
ಪ್ರಥಮ ಬಹುಮಾನ 15000/- ನಗದು ಹಾಗೂ ಕೇಸರಿ ಟ್ರೋಫಿ,
ದ್ವಿತೀಯ ಬಹುಮಾನ 10000/-ನಗದು ಹಾಗೂ ಕೇಸರಿ ಟ್ರೋಫಿ
ತೃತೀಯ ಬಹುಮಾನ 5,000/- ನಗದು ಹಾಗೂ ಕೇಸರಿ ಟ್ರೋಫಿ
ಚತುರ್ಥ ಬಹುಮಾನ 5000/- ನಗದು ಹಾಗೂ ಕೇಸರಿ ಟ್ರೋಫಿ ನೀಡಲಾಗುವುದು.
ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕಾಗಿ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.