ಮಂಗಳೂರಿನಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದರು.

ಶೈಕ್ಷಣಿಕ ಕ್ಷೇತ್ರದ ಪಾವಿತ್ರ್ಯವನ್ನು ಹಾಳುಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ಅವಕಾಶ ನಮ್ಮೆದುರಿಗೆ ಬಂದಿದ್ದು, ನಮ್ಮ ಎನ್.ಡಿ.ಎ ಅಭ್ಯರ್ಥಿಗಳಾಗಿರುವ ಶಿಕ್ಷಕರ ಕ್ಷೇತ್ರದ ಶ್ರೀ ಎಸ್.ಎಲ್.ಭೋಜೇಗೌಡ, ಪದವೀಧರರ ಕ್ಷೇತ್ರದ ಶ್ರೀ ಧನಂಜಯ ಸರ್ಜಿ ಅವರುಗಳಿಗೆ ಪ್ರಥಮ ಪ್ರಾಶಸ್ತ್ಯತದ ಮತಗಳು ಗಳಿಕೆಯಾಗುವ ನಿಟ್ಟಿನಲ್ಲಿ ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @Kotas BJP, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @karkalasunil , ಶಾಸಕರಾದ ಶ್ರೀ ರಾಜೇಶ್ ನಾಯ್ಕ ಉಳಿಪ್ಪಾಡಿ, ಶ್ರೀ ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಶ್ರೀ @dsarunshimoga, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗಣೇಶ್ ಕಾರ್ಣಿಕ್,ರಾಜ್ಯ ಕಾರ್ಯದರ್ಶಿಗಳು ಹಾಗೂ ಲೋಕಸಭಾ ಅಭ್ಯರ್ಥಿ ಶ್ರೀ @CaptBrijesh, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶ್ರೀ ವಿಕಾಸ್ ಪುತ್ತೂರು, ಸೇರಿದಂತೆ ಪಕ್ಷದ ಮುಖಂಡರು, ಪದವೀಧರ ಹಾಗೂ ಶಿಕ್ಷಕ ಮತದಾರರು ಉಪಸ್ಥಿತರಿದ್ದರು.