ತಮಿಳುನಾಡು: ಕೊಯಂಬತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ಧ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಡಿಎಂಕೆ ಗಣಪತಿ ರಾಜ್ಕುಮಾರ್ ವಿರುದ್ಧ 17,366 ಮತಗಳ ಅಂತರದಿಂದ ಅಣ್ಣಾಮಲೈ ಸೋತಿದ್ದಾರೆ.
ತಮಿಳುನಾಡಿನ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ 17 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತಿದ್ದಾರೆ. ಕೊಯಂಬತ್ತೂರು ಲೋಕಸಭಾ ಕ್ಷೇತ್ರದಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿಎಂಕೆ ಗಣಪತಿ ರಾಜ್ಕುಮಾರ್ ವಿರುದ್ಧ 17,366 ಮತಗಳ ಅಂತರದಿಂದ ಅಣ್ಣಾಮಲೈಗೆ ಸೋಲು ಕಂಡರು.
ಏಪ್ರಿಲ್ 19 ರಿಂದ ಆರಂಭವಾಗಿದ್ದ 18ನೇ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆದು ಜೂನ್ 1 ರಂದು ಮುಕ್ತಾಯವಾಗಿತ್ತು. ಜಿದ್ದಾಜಿದ್ದಿಯ ಚುನಾವಣೆಯ ಫಲಿತಾಂಶ ದೇಶದ ಕುತೂಹಲ ಕೆರಳಿಸಿದೆ. ದೇಶದ 543 ಲೋಕಸಭಾ ಕ್ಷೇತ್ರಕ್ಕೆ ಶೇ. 66.33 ರಷ್ಟು ಮತದಾನವಾಗಿದೆ. ಬಿಜೆಪಿ ಒಟ್ಟು 441 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್ 328 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.