ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ.

ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ (World Health) ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ. ಇದೇ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.