ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಯವರು ಅತ್ಯುತ್ತಮ ಕೆಲಸಗಳನ್ನು ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಅಂತಾ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಅವರು ಇಂದು 18ನೇ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸಂಸತ್ತಿನಲ್ಲಿ ಮಾತನಾಡಿ, ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಿ ಬಳಿಕ ಮೊದಲಿಗೆ ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಬಳಿಕ ಓಂ ಬಿರ್ಲಾ ಅವರು ಅತ್ಯುತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಅಪಪ್ರಚಾರಕ್ಕೆ ಚುನಾವಣೆ ಮೂಲಕ ಉತ್ತರ: ಇದೇ ವೇಳೆ ಚುನಾವಣಾ ಆಯೋಗಕ್ಕೂ ಅಭಿನಂದನೆಗಳನ್ನು ಸಲ್ಲಿಸಿದ ಅವರು, ವಿಶ್ವದ ಅತಿದೊಡ್ಡ ಚುನಾವಣೆ, ಜನರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ದಾಖಲೆಯ ಮತದಾನವಾಗಿದೆ. ಕಾಶ್ಮೀರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿತ್ತು. ಆದರೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗಿದೆ ಎಂದು ಹೇಳಿದರು.

ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದೆ. ದೊಡ್ಡ ಆರ್ಥಿಕ, ಸಾಮಾಜಿಕ ಬದಲಾವಣೆಯತ್ತ ಹೆಜ್ಜೆ ಇಡುವ ಬಜೆಟ್ ಇದಾಗಲಿದೆ. ರಾಜ್ಯದ ವಿಕಾಸವೇ ದೇಶದ ವಿಕಾಸ್ ಎನ್ನುವ ಭಾವನೆಯಿಂದ ನಮ್ಮ ಸರ್ಕಾರ ಮುಂದುವರಿಯಲಿದೆ. 12 ರಿಂದ 5 ನೇ ಬಲಿಷ್ಠ ಆರ್ಥಿಕತೆಯಾಗಿ ದೇಶ ಬದಲಾಗಿದೆ. ಕೊರೊನಾ ಮತ್ತು ಯುದ್ಧದ ಪರಿಸ್ಥಿತಿಯಲ್ಲೂ ಭಾರತ ಅಭಿವೃದ್ಧಿ ಸಾಧಿಸಿದೆ. ಸರ್ವಿಸ್ ಸೆಕ್ಟರ್ ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್‌: ನಮ್ಮ ಸರ್ಕಾರ ಮೂರನೇ ಬಲಿಷ್ಠ ಆರ್ಥಿಕತೆಯಾಗಲು ಹೊರಟಿದೆ. ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್ ಆಗುತ್ತಿದೆ. ಉದ್ಯೋಗ ಸೃಷ್ಟಿಯಾಗುತ್ತಿವೆ. ಕೃಷಿ ಆಧಾರಿತ ಉದ್ಯಮ ವಿಸ್ತರಣೆ ಮಾಡಲಾಗುತ್ತಿದೆ. ರೈತರಿಗಾಗಿ ಸರ್ಕಾರಿ ಸಂಸ್ಥೆಗಳ ನೆಟ್ವರ್ಕ್ ಮಾಡುತ್ತಿದೆ. ಸಹಕಾರಿ ವಲಯದಲ್ಲಿ ದೊಡ್ಡ ಬದಲಾವಣೆ ಮಾಡುತ್ತಿದೆ. ಸಣ್ಣ ಖರ್ಚು ನಿಭಾಯಿಸಲು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಸಹಾಯ ಮಾಡಲಾಗುತ್ತಿದೆ.

ಎಂಎಸ್‍ಪಿಯಲ್ಲಿ ದಾಖಲೆಯ ಸಾಧನೆ ಮಾಡಿದೆ. ವರ್ತಮಾನ ಅಗತ್ಯ ಆಧರಿಸಿ ಕೃಷಿ ವಲಯದಲ್ಲಿ ಬದಲಾವಣೆ ಮಾಡುತ್ತಿದೆ ಎಂದು ತಿಳಿಸಿದರು. ವಿಶ್ವದ ಹಲವು ದೇಶಗಳನ್ನು ಭಾರತ ಪ್ರೇರೆಪಿಸುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿವೆ. ಗ್ರೀನ್ ಎನರ್ಜಿಗೆ ಭವಿಷ್ಯವಿದೆ. ಈ ಹಿನ್ನೆಲೆ ನಮ್ಮ ಸರ್ಕಾರ ಇದಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಮಹಿಳೆಯರ ಆರ್ಥಿಕ ಸ್ಥಿತಿ ಹೆಚ್ಚಿಸಿದೆ. ಪಿಎಂ ಆವಾಸ್ ಯೋಜನೆಯಡಿ ಮಹಿಳೆಯರಿಗೆ ಹೆಚ್ಚು ಮನೆ ನೀಡಿದೆ.

ಮುಂದಿನ ಅವಧಿಯಲ್ಲಿ ಮೂರು ಕೋಟಿ ಮನೆ ನಿರ್ಮಿಸಿ ಹೆಚ್ಚು ಮಹಿಳೆಯರಿಗೆ ನೀಡಲಾಗುವುದು. ಸ್ವಂಸಹಾಯ ಗುಂಪುಗಳಿಗೆ ಆದ್ಯತೆ ನೀಡಲಾಗುತ್ತಿದೆ. ನಮೋ ಡ್ರೋನ್ ಮೂಲಕ, ಲಕ್ ಪತಿ ದೀದಿ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಮಾಡಲಾಗುತ್ತಿದೆ ಎಂದರು.

ಮೂಲಭೂತ ಸೌಕರ್ಯಗಳ ಹೆಚ್ಚಳ: ಎರಡು, ಮೂರನೇ ಹಂತದ ನಗರಗಳಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದೆ. ಮಹಾನಗರಗಳಲ್ಲಿ ಮೆಟ್ರೋ ವಿಸ್ತರಣೆಯಾಗುತ್ತಿದೆ. ವಂದೇ ಭಾರತ್ ರೈಲು ಯೋಜನೆ ಆರಂಭವಾಗಲಿದೆ. ನಗರಗಳ ಮೂಲ ಸೌಕರ್ಯ ಹೆಚ್ಚಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಎರಡು ಪಟ್ಟು ಹೆಚ್ಚಿಸಿದೆ. ಹೈಸ್ಪೀಡ್ ರೈಲ್ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಬಾಕಿ ಕಡೆ ಬುಲೆಟ್ ಟ್ರೈನ್ ಸಾಧ್ಯತೆ ಪರಿಶೀಲಿಸಲಾಗುತ್ತಿದೆ.

ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಅಸ್ಸಾಂನಲ್ಲಿ ಸೆಮಿ ಕಂಡಕ್ಟರ್ ಉತ್ಪಾದನೆ ಮಾಡಲಾಗುವುದು. ಹತ್ತು ವರ್ಷಗಳಲ್ಲಿ ಅನೇಕ ಸಮಸ್ಯೆ ಬಗೆಹರಿಸಿದೆ. ದೇಶದ ಹಲವು ಕ್ಷೇತ್ರಗಳು ಅಭಿವೃದ್ಧಿ ಕಂಡಿದೆ. ಈಶಾನ್ಯ ರಾಜ್ಯಗಳ ವಿಷಯ ಬರುತ್ತಿದ್ದಂತೆಯೇ ಮಣಿಪುರ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು.

ಮೂಲಭೂತ ಸೌಕರ್ಯಗಳ ಹೆಚ್ಚಳ: ಎರಡು, ಮೂರನೇ ಹಂತದ ನಗರಗಳಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದೆ. ಮಹಾನಗರಗಳಲ್ಲಿ ಮೆಟ್ರೋ ವಿಸ್ತರಣೆಯಾಗುತ್ತಿದೆ. ವಂದೇ ಭಾರತ್ ರೈಲು ಯೋಜನೆ ಆರಂಭವಾಗಲಿದೆ. ನಗರಗಳ ಮೂಲ ಸೌಕರ್ಯ ಹೆಚ್ಚಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಎರಡು ಪಟ್ಟು ಹೆಚ್ಚಿಸಿದೆ. ಹೈಸ್ಪೀಡ್ ರೈಲ್ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಬಾಕಿ ಕಡೆ ಬುಲೆಟ್ ಟ್ರೈನ್ ಸಾಧ್ಯತೆ ಪರಿಶೀಲಿಸಲಾಗುತ್ತಿದೆ ಎಂದರು.