ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಪ್ರಪ್ರಥಮ ಪದಾಧಿಕಾರಿಗಳ ಸಭೆಯು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಬಿ. ಸಿ. ರೋಡು ಬಿಜೆಪಿ ಕಛೇರಿಯಲ್ಲಿ ಜರಗಿತು.
ಸಭೆಯಲ್ಲಿ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅವರು ಮಾತನಾಡುತ್ತಾ ಕ್ಷೇತ್ರದಲ್ಲಿ ಪಕ್ಷವನ್ನು ಎಲ್ಲರೂ ಒಟ್ಟಾಗಿ ಬಲಪಡಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಆ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಗೆ ತರದೆ ನಾವೆಲ್ಲರೂ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಕೆಲಸ ಮಾಡುವಂತೆ ತಿಳಿಸಿದರು.
ಸಂಘಟನಾತ್ಮಕವಾಗಿ ಬೂತ್ ಸಮಿತಿಗಳನ್ನು ರಚಿಸುವ ದೃಷ್ಟಿಯಿಂದ ಮಹಾಶಕ್ತಿ ಕೇಂದ್ರಕ್ಕೆ ಪ್ರಭಾರಿಗಳನ್ನು ನೇಮಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ , ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ , ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು ಜಿಲ್ಲಾ ವಕ್ತಾರ ಡೊಂಬಯ ಅರಳ ಪ್ರಧಾನ ಕಾರ್ಯದರ್ಶಿ ಗಳಾದ ಸುದರ್ಶನ್ ಬಜ , ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.