ಆಗಸ್ಟ್ ಒಂದರಿಂದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಕೊಡಲು ನಿನ್ನೆ ಸಂಜೆ ಮುಖ್ಯಮಂತ್ರಿಗಳಾದ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ.

ಬಹು ಬೇಡಿಕೆಯ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಗಸ್ಟ್ 1ರಿಂದ ಶಿಫಾರಸುಗಳು ಜಾರಿಗೆ ಬರಲಿವೆ.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ. ಸರ್ಕಾರಿ ನೌಕರರ ಹಿತ ಕಾಯುತ್ತಿದೆ.

ಅದರಂತೆ ಬಹು ಬೇಡಿಕೆಯ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಗಸ್ಟ್ 1 ರಿಂದ ಶಿಫಾರಸುಗಳು ಜಾರಿಗೆ ಬರಲಿದ್ದು, ಇದರಿಂದ ಸರ್ಕಾರಿ ನೌಕರರ ವೇತನ ಶೇ.27.5 ರಷ್ಟು ಹೆಚ್ಚಳವಾಗಲಿದೆ. 12 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಇದರಿಂದ ಅನುಕೂಲವಾಗಲಿದೆ.

ಎಲ್ಲ ವರ್ಗದವರ ಹಿತ ಕಾಯುತ್ತಿರುವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳು.