ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ.

ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.

ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.