ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿದ್ದಂತೆ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ.
ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.
ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.