ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಜ್ಞಾನದೀಪ ಶಿಕ್ಷಕರ ನೀಡುತ್ತಿದ್ದು, ಅದರಂತೆ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಗೆ ಸೇರಿದ ಮುಡಿಪು ವಲಯದ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕಿಯನ್ನು ನೀಡಿದ್ದು, ಶಿಕ್ಷಕಿಯ ಆಯ್ಕೆ ಮಂಜೂರು ಪತ್ರವನ್ನು ಶಾಲಾ ಮುಖ್ಯ ಶಿಕ್ಷಕಿ ವಸಂತಿ ಪಿ ರವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಡಿಪು ವಲಯ ಮೇಲ್ವಿಚಾರಕ ರಾಜೇಶ್, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ, ಕುರ್ನಾಡ್ ಒಕ್ಕೂಟ ಅಧ್ಯಕ್ಷೆ ಮಮತಾ, ಕೋಶಾಧಿಕಾರಿ ಶಶಿರೇಖಾ, ಒಕ್ಕೂಟ ಸೇವಾ ಪ್ರತಿನಿಧಿ ಕವಿತಾ, ಜ್ಞಾನದೀಪ ಶಿಕ್ಷಕಿ ಸವಿತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.