ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಕಾಸ್ಬ ಶಕ್ತಿ ಕೇಂದ್ರದ ಜಕ್ರಿಬೆಟ್ಟು ಬೂತ್ 64 ಸಮಿತಿಯ ಸಂಘಟನಾ ಪರ್ವ ಕಾರ್ಯಕ್ರಮ ಅಧ್ಯಕ್ಷರಾದ ಚಂದ್ರಹಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ಜರಗಿತು.
ಮಂಗಳೂರು ವಿಧಾನಸಭಾ ಕ್ಷೇತ್ರದ ಜಿಲ್ಲಾ ಪ್ರಭಾರಿ ಸಂಘಟನಾ ಕಾರ್ಯದರ್ಶಿ ದಿನೇಶ್ ಆಮ್ಟೂರು ಮಾತನಾಡಿ ಭಾರತೀಯ ಜನತಾ ಪಾರ್ಟಿಯನ್ನು ಬಲಪಡಿಸುವಲ್ಲಿ ನೂತನ ತಂಡದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿಯ ಪ್ರಮುಖರು ಒಟ್ಟಾಗಿ ಒಂದೇ ಕುಟುಂಬದ ಸದಸ್ಯರಂತೆ ಸಂಘಟನೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ವಸಂತ್ ಭಂಡಾರಿ ಚಂಡ್ತಿಮಾರ್, ಜಗದೀಶ್ ಪೂಜಾರಿ ಹಾಗೂ ಸಮಿತಿಯ ಪ್ರಮುಖರನ್ನು ಅಭಿನಂದಿಸಲಾಯಿತು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ, ಪುರಸಭೆಯ ಸದಸ್ಯ ಗೋವಿಂದ ಪ್ರಭು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಲಾಲ್ ಹಾಗೂ ಬಂಟ್ವಾಳ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುರಸಭೆಯ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು ಹಾಗೂ ಮೀನಾಕ್ಷಿ ಗೌಡ, ಉಪಾಧ್ಯಕ್ಷ ನಾಗೇಶ್ ದಾಸ್ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.