ನೆಟ್ಲಮುಡ್ನೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಸಮಿತಾ ಡಿ. ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ನಿವೃತ ಅಧ್ಯಾಪಕರಾದ ಶ್ರಿ ರಾಮಚಂದ್ರ ಅವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸಚ್ಚಿದಾನಂದ, ಸದಸ್ಯರಾದ ಶ್ರೀಧರ ರೈ, ಅಬ್ದುಲ್ ಲತೀಫ್ , ಲಕ್ಷ್ಮೀ, ಅಶೋಕ ರೈ , ಧನಂಜಯ , ಶಕಿಲಾ , ಗ್ರಾಮ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆ , ಗ್ರಾಮದ ಗ್ರಾಮಸ್ಥರು ಭಾಗವಹಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿ ಶ್ರೀಮತಿ ಅನುಷಾ ಡಿ ಅವರು ಸ್ವಾಗತಿ, ವಂದಿಸಿರು. ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ಸಹಕರಿಸಿದರು.