ಬಂಟ್ವಾಳ: ಬೆಸ್ಟ್ಆಂಗ್ಲ ಮಾಧ್ಯಮ ಶಾಲೆ ಬಿ.ಸಿ.ರೋಡ್‌ನಲ್ಲಿ ನಡೆದ ಬಂಟ್ವಾಳ ವಲಯ ಮಟ್ಟದ 17 ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ವಿ.ಎಸ್. ಇಂಗ್ಲೀಷ್ ಮೀಡಿಯಮ್ ಸ್ಕೂಲ್, ವಿದ್ಯಾಗಿರಿ, ಬಂಟ್ವಾಳದ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆಆಯ್ಕೆಯಾಗಿದೆ.
ಅದೇ ವಿಭಾಗದಲ್ಲಿ ಬಾಲಕಿಯರ ತಂಡವು ದ್ವಿತೀಯ ಸ್ಥಾನಿಯಾಗಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಇವರಿಗೆಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ , ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಕೆ. ರೇಖಾ ಶೆಣೈ, ಶಾಲಾ ಮುಖ್ಯಸ್ಥರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.