ಬೆಂಗಳೂರು ಸಿಟಿ ರೌಂಡ್ಸ್‌ನ ಭಾಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ಸಿ.ಎಂ.ಸಿದ್ಧರಾಮಯ್ಯ ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರು ಸಿಟಿ ರೌಂಡ್ಸ್‌ನ ಭಾಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿ

ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.