ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ನಗರ ಮಹಾಶಕ್ತಿಕೇಂದ್ರದ ಕಾರ್ಯಕಾರಿಣಿ ಸಭೆ ಮತ್ತು ನೂತನ ಬೂತ್ ಪದಾಧಿಕಾರಿಗಳ ಅಭಿನಂದನಾ ಸಭೆಯು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುರೇಶ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿಸಿ ರೋಡಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಸದಸ್ಯತನ ಅಭಿಯಾನದ ಬಂಟ್ವಾಳ ನಗರ ಮಹಾ ಶಕ್ತಿ ಕೇಂದ್ರದ ಪ್ರಭಾರಿ ಯಶವಂತ್ ಅಮೀನ್ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಸಂಘಟನಾತ್ಮಕ ಮಾನ್ ಕೀ ಬಾತ್ ನ್ನು ಪ್ರತಿ ಬೂತ್ ಮಟ್ಟದಲ್ಲಿ ಬೂತ್ ಸಮಿತಿ ಹಾಗೂ ಕಾರ್ಯಕರ್ತರು ಸೇರಿಕೊಂಡು ವೀಕ್ಷಣೆ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಕಾರ್ಯದರ್ಶಿ ದಿನೇಶ್ ಆಮ್ಟೂರು ಜಿಲ್ಲಾ ಬೂತ್ ಕಾರ್ಯದ ಸಂಚಾಲಕರಾದ ಸಂದೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಮಂಡಲ ಉಪಾಧ್ಯಕ್ಷರಾದ ಗೋವಿಂದ ಪ್ರಭು, ಕೋಶಾಧಿಕಾರಿ ದಿನೇಶ್ ಭಂಡಾರಿ, ಕಾರ್ಯದರ್ಶಿ ಜನಾರ್ದನ ಬೊಂಡಾಲ, ನಗರ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುರೇಶ್ ಟೈಲರ್ ಹಾಗೂ ಪುರಸಭೆ ಗೌರವಾನ್ವಿತ ಸದಸ್ಯರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು ಮಂಡಲ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಭಂಡಾರಿಬೆಟ್ಟು ಸ್ವಾಗತಿಸಿ, ಪ್ರಣಮ್ ಅಜ್ಜಿಬೆಟ್ಟು ವಂದಿಸಿದರು.