ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಂಗಬೆಟ್ಟು ಮಹಾಶಕ್ತಿಕೇಂದ್ರದ ಕಾರ್ಯಕಾರಿಣಿ ಸಭೆಯು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸತೀಶ್ ಪೂಜಾರಿ ಅವರ ಅದ್ಯಕ್ಷತೆಯಲ್ಲಿ ಸಿದ್ದಕಟ್ಟೆ ಅಶ್ವಿನಿ ವಾಣಿಜ್ಯ ಸಂಕಿರಣದ ಅಕ್ಷಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಸದಸ್ಯತನ ಅಭಿಯಾನದ ಸಂಚಾಲಕರಾದ ಸಂದೇಶ ಶೆಟ್ಟಿ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಬಿಜೆಪಿ ಸಂಘಟನೆ ವಿಷಯ ಕುರಿತು ಮಾತಾನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಬಾಜಪ ಎದುರಿಸಿ ಬಂದಿರುವ ಹೋರಾಟ ಮತ್ತು ಸವಾಲುಗಳನ್ನು ಹೇಳುತ್ತಾ ಮಾನ್ ಕೀ ಬಾತ್ ನ್ನು ಪ್ರತಿ ಬೂತ್ ಮಟ್ಟದಲ್ಲಿ ಬೂತ್ ಸಮಿತಿ ಹಾಗೂ ಕಾರ್ಯಕರ್ತರು ಸೇರಿಕೊಂಡು ವೀಕ್ಷಣೆ ಮಾಡಬೇಕೆಂದು ತಿಳಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಮಂಡಲಕಾರ್ಯದರ್ಶಿ ಗಳಾದ ಜನಾರ್ದನ ಬೊಂಡಲ, ಪ್ರಭಾಕರ ಪ್ರಭು, ಸಂಜೀವ ಪೂಜಾರಿ, ಬಿಜೆಪಿ ಬಂಟ್ವಾಳ ಮಂಡಲದ ಯುವ ಮೋರ್ಚಾ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದರ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮ್ಟೂರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗು ಬೂತ್ ಸಮಿತಿಯ ಪದಾಧಿಕಾರಿಗಳು ಮಂಡಲ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಗಬೆಟ್ಟು ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸಂತೋಷ ರಾಯಿಬೆಟ್ಟು ಸ್ವಾಗತಿಸಿ, ಮಂಡಲದ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ ವಂದಿಸಿದರು.