ಬಂಟ್ವಾಳದ ಬಂಟರ ಭವನದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿಯು ಯುವ ಕಾರ್ಯಕರ್ತ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ದೊಡ್ಡ ಅಂತರದಿಂದ ಗೆಲುವು ಸಾಧಿಸಲು ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @DVSadanandGowda, ಪಕ್ಷದ ರಾಜ್ಯ ಸಹ ಉಸ್ತುವಾರಿಗಳಾದ ಶ್ರೀ @ReddySudhakar21, ವಿರೋಧ ಪಕ್ಷ ನಾಯಕರಾದ ಶ್ರೀ @RAshokaBJP, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ @NswamyChalavadi, ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @karkalasunil, ಸಂಸದರಾದ ಶ್ರೀ @KotasBJP, ಶ್ರೀ @CaptBrijesh, ಶಾಸಕರಾದ ಶ್ರೀ @URajeshNaik, ಶ್ರೀ @UmanathaKotian, ಡಾ. @bharathshetty_y, ಶ್ರೀ @vedavyasbjp, ಶ್ರೀ @HPoonja, ಕು. @BJPBhagirathi, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಅಭ್ಯರ್ಥಿ ಶ್ರೀ @KishorPuttur, ಜಿಲ್ಲಾಧ್ಯಕ್ಷರಾದ ಶ್ರೀ @Sathish_Kumpala ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.