ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು.

ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿ ಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಚುನಾವಣಾ ಸಹ ಉಸ್ತುವಾರಿಯಾದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಭಿನಂದಿಸಿದರು.

ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಚುನಾವಣಾ ಸಹ ಉಸ್ತುವಾರಿಯಾದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಭಿನಂದಿಸಿದರು.