ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಧಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ವತಿಯಿಂದ ಮೂಲಾಭೂತ ಸಾಕ್ಷಾರತ ಮತ್ತು ಸಂಖ್ಯಾ ಜ್ಞಾನದ ಕಲಿಕಾ ಹಬ್ಬ- 2025 ಕಾರ್ಯಕ್ರಮನಡೆಯಿತು.

ಕಾರ್ಯಕ್ರಮವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಂಜಿನಿ ಉದ್ಘಾಟಿಸಿ ಶುಭ ಹಾರೈಸಿದರು.

ಬಾಳ್ತಿಲ ಕ್ಲಸ್ಟರ್ನ 9 ಶಾಲೆಗಳ ಸುಮಾರು ಸುಮಾರು 114 ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಷಾ, ನರಿಕಂಬು ಶಾಲಾ ಮುಖ್ಯ ಶಿಕ್ಷಕಿ ಸುಜಾತ, ಬಾಳ್ತಿಲ ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ, ಶಂಭೂರು ಶಾಲಾ ಮುಖ್ಯ ಶಿಕ್ಷಕ ಜಯರಾಮ್, ಶಾಲಾ ನಾಯಕ ಜೀವನ್, ಶಾಲಾ ನಾಯಕಿ ಸಿಂಚನ, ಮೊದಲಾದವರು ಉಪಸ್ಥಿತರಿದ್ದರು.

ಮಕ್ಕಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿ, ಶಿಕ್ಷಕಿ ಮಮತಾ ಶೆಟ್ಟಿ ವಂದಿಸಿದರು, ಶಿಕ್ಷಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರರದ ಸುಮಿತ್ರ, ವಿಶಾಲಾಕ್ಷಿ, ಅಮಿತಾ ಸಹಕರಿಸಿದರು.