ಬಂಟ್ವಾಳ: 2023-24ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ ಪದವಿ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ವಿಜ್ಞಾನ ವಿಭಾಗದ ಯಶ್ವಿತ ಹೆಚ್.ಆರ್. ಅವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ 96.87% ಅಂಕಗಳೊಂದಿಗೆ ನಾಲ್ಕನೇ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದರು.
ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಿರುವ ಈ ಸಂಸ್ಥೆಯ ಕೀರ್ತಿಯನ್ನು ಈ ವಿಶಿಷ್ಟ ಸಾಧನೆಯೊಂದಿಗೆ ಹೆಚ್ಚಿಸಿದ ರ‍್ಯಾಂಕ್ ವಿಜೇತ ವಿದ್ಯಾರ್ಥಿನಿಯನ್ನುಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಶ್ರೀ ಅನಿರುದ್ಧ್ ಕಾಮತ್, ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಶ್ರೀಮತಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.