ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಸಮಿತಿ ವತಿಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಮತ್ತು ದೇವಸ್ಥಾನದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರದ ಪ್ರಮುಖರ ಸಭೆಯು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಬಿಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಜರಗಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್.ಸಿ. ನಾರಾಯಣ್, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.