ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ, ವತಿಯಿಂದ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.) ಬಂಟ್ವಾಳ, ಇದರ ಆಶ್ರಯದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಂಟ್ವಾಳ ಇದರ ಸಹಯೋಗದೊಂದಿಗೆ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ದಿನಾಂಕ 6-10-2024 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9 ರಿಂದ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪ ಬಂಟ್ವಾಳದಲ್ಲಿ ಜರಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ರೋನಾಲ್ಟ್ ಡಿಸೋಜ ವಹಿಸಲಿರುವರು.

ಕಾರ್ಯಕ್ರಮದ ದಿಕ್ಸೂಚಿ ಭಾಷಣವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ.)ಬೆಳ್ತಂಗಡಿಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ ಅಧ್ಯಕ್ಷರಾದ ಪ್ರಕಾಶ್ ಕಾರಂತ್, ರಾಣಿ ಅಬ್ಬಕ್ಕ ತುಳು ಅಕಾಡೆಮಿ ಅಧ್ಯಕ್ಷ ತುಕರಾಮ್ ಪೂಜಾರಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ ಕಕ್ಯ, ಬಂಟ್ವಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಪ್ರಕಾಶ್ ಮೊದಲಾದವರು ಭಾಗವಹಿಸಲಿರುವರು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಎಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.