ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ನಡೆದ ಸಭೆಯ ನೇತೃತ್ವ ವಹಿಸಿ, ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್‌ ಅವರು, ಕರಾವಳಿಯ ಹಲವಾರು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ಸಮಾಲೋಚನೆ ನಡೆಸಿದರು.  ಇದನ್ನೂ ಓದಿ : ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಜಾಗೃತಿ ಅಭಿಯಾನ
ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕರಾವಳಿ ಪ್ರವಾಸಿ ತಾಣವಾಗಿ ರೂಪಿಸುವ ಉದ್ದೇಶದೊಂದಿಗೆ, ವಿಶ್ವದರ್ಜೆಯ ಸುಸ್ಥಿರ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಹಾಗೂ ನೈಸರ್ಗಿಕ ಸೌಂದರ್ಯವನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಸಮೃದ್ಧಗೊಳಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್‌ ಅವರು ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.