ಬೆಂಗಳೂರು : ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗದವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಕಂದಾಯ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಸಮಾಲೋಚನೆ ನಡೆಸಿದರು. ಇದನ್ನೂ ಓದಿ ; ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ

ಕರ್ನಾಟಕ ಮತ್ತು ಝೆಕ್ ಗಣರಾಜ್ಯದ ನಡುವಿನ ಪರಸ್ಪರ ಸಹಕಾರ ಹಾಗೂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.

ಸಚಿವರಾದ ಎಂ.ಬಿ. ಪಾಟೀಲ್, ಸಂಸದರು ಹಾಗೂ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾದ ಡಾ. ಜಿ.ಸಿ. ಚಂದ್ರಶೇಖರ್, ಝೆಕ್ ಗಣರಾಜ್ಯದ ವಿದೇಶಾಂಗ ಸಚಿವೆ ಮರಿಯಾ ಚಟರ್ಡೋವ ಸೇರಿದಂತೆ ನಿಯೋಗದ ಪ್ರತಿನಿಧಿಗಳಾದ ಮಾರೆಟ್ ಲಿಬ್ರರ್ಕಿ, ಕ್ಯಾತರಿನ ಗಜುರ್ನೋವಾ, ರಿಚರ್ಡ್ ಲಾವರ್ಟಿ, ಮಿರೋಸ್ಲಾವ್ ಒಕ್ರೂಲಿ, ಕ್ಯಾತರಿನ ಪೀಟರ್ಸನ್, ಕ್ಯಾತರಿನ ವವ್ಕೊವಾ, ಜನ್ ರಾಫಾಜ್, ಗುನ್ನತ್ ಚೌಧರಿ, ರಾಜ್ಯದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಇತರರು ಉಪಸ್ಥಿತರಿದ್ದರು.